TSK

TSK · ಮಾರ್ಕನು 10:31

Treasury of Scripture Knowledge references in ಕನ್ನಡ IRV.

Back to passage

‹ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.›

‹ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು?› ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ‹ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

¶ ಅದಕ್ಕೆ ಯೇಸು, ‹“ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ”› ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.

‹ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.›

¶ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.