TSK

TSK · ಮಾರ್ಕನು 11:25

Treasury of Scripture Knowledge references in ಕನ್ನಡ IRV.

Back to passage

‹ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,›

‹ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ› ‹ನಮ್ಮ›‹ತಪ್ಪುಗಳನ್ನು ಕ್ಷಮಿಸು.›

‹ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.›

‹ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.›

ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.

ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.