TSK

TSK · ಮಾರ್ಕನು 11:3

Treasury of Scripture Knowledge references in ಕನ್ನಡ IRV.

Back to passage

ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.

¶ ‹“ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ”› ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.

ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.