TSK

TSK · ಮಾರ್ಕನು 13:22

Treasury of Scripture Knowledge references in ಕನ್ನಡ IRV.

Back to passage

¶ ‹“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.›

‹ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು,›‹‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.›

‹ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.›

ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.

¶ ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.

ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,