TSK

TSK · ಮಾರ್ಕನು 14:12

Treasury of Scripture Knowledge references in ಕನ್ನಡ IRV.

Back to passage

ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.

ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.

¶ “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.

¶ ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.

¶ ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.

ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.