TSK

TSK · ಮಾರ್ಕನು 16:6

Treasury of Scripture Knowledge references in ಕನ್ನಡ IRV.

Back to passage

ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.

‹ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.›

¶ ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.

ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು.

ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›

ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.

ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.

ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;