TSK

TSK · ಮಾರ್ಕನು 3:8

Treasury of Scripture Knowledge references in ಕನ್ನಡ IRV.

Back to passage

¶ ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.

ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.

ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.

ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”

¶ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?

¶ ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.