TSK

TSK · ಮಾರ್ಕನು 4:41

Treasury of Scripture Knowledge references in ಕನ್ನಡ IRV.

Back to passage

ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;

ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.

ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು.

ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.

¶ ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.

ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.