TSK

TSK · ಮಾರ್ಕನು 4:7

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.

‹ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.›

‹ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.›

ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.

ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.