TSK

TSK · ಮಾರ್ಕನು 5:24

Treasury of Scripture Knowledge references in ಕನ್ನಡ IRV.

Back to passage

¶ ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.

ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.

ಆಗ ಯೇಸುವು, ‹“ನನ್ನನ್ನು ಮುಟ್ಟಿದವರಾರು?”› ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.

ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.