TSK

TSK · ಮಾರ್ಕನು 6:42

Treasury of Scripture Knowledge references in ಕನ್ನಡ IRV.

Back to passage

¶ ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.

ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.

ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.

ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, ‹“ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು”› ಎಂದು ಹೇಳಿದನು.