TSK

TSK · ಮಾರ್ಕನು 6:56

Treasury of Scripture Knowledge references in ಕನ್ನಡ IRV.

Back to passage

“ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.

ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.

ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.

ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.

ಆದರೆ ಯೇಸು, ‹“ಇಷ್ಟಕ್ಕೇ ಬಿಡಿರಿ”› ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.

ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.