TSK

TSK · ಮಾರ್ಕನು 7:3

Treasury of Scripture Knowledge references in ಕನ್ನಡ IRV.

Back to passage

ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.

‹ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ”› ಎಂದು ಹೇಳಿದನು.

¶ ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.