TSK

TSK · ಮಾರ್ಕನು 8:13

Treasury of Scripture Knowledge references in ಕನ್ನಡ IRV.

Back to passage

¶ ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.

ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!

¶ ‹“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.›

ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.

‹ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ”› ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.

ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,