TSK

TSK · ಮಾರ್ಕನು 8:17

Treasury of Scripture Knowledge references in ಕನ್ನಡ IRV.

Back to passage

ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.

ಯೇಸು ಅದನ್ನು ತಿಳಿದು, ‹“ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?›

ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, ‹“ನಿನ್ನ ಕೈ ಚಾಚು”› ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.

¶ ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.

ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,

ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.

¶ ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.