TSK

TSK · ಮತ್ತಾಯನು 13:3

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.

ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.

“ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,

¶ “ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;

¶ “ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’

¶ ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.

¶ ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,

ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, ‹“ಸೈತಾನನು ಸೈತಾನನನ್ನು ಬಿಡಿಸುವುದುಂಟೇ?›

¶ ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, ‹“ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?›

¶ ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, ‹“ಒಬ್ಬ ಮನುಷ್ಯನು›‹ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ›‹ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.›

‹“ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.›

¶ ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು,

¶ ‹“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.›