TSK

TSK · ಮತ್ತಾಯನು 18:31

Treasury of Scripture Knowledge references in ಕನ್ನಡ IRV.

Back to passage

ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.

ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!

‹ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.›

¶ ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.

¶ ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.

¶ ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.