TSK

TSK · ಮತ್ತಾಯನು 19:5

Treasury of Scripture Knowledge references in ಕನ್ನಡ IRV.

Back to passage

ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.

ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.

¶ ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.

ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.

ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.

¶ ಆದರೆ ಯೇಸು ಅವರಿಗೆ, ‹“ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು.›

ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.

ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.