TSK

TSK · ಮತ್ತಾಯನು 21:37

Treasury of Scripture Knowledge references in ಕನ್ನಡ IRV.

Back to passage

ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?

ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.

‹ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.›

ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.

¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›

¶ ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.