TSK

TSK · ಮತ್ತಾಯನು 21:41

Treasury of Scripture Knowledge references in ಕನ್ನಡ IRV.

Back to passage

¶ “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,

ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.

ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.

ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.

¶ ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;

¶ ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.

ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.

‹ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.›

‹ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.›

‹ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.›

‹ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.›

‹ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.›

¶ “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.

ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.

¶ ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.

ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.

ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?