TSK

TSK · ಮತ್ತಾಯನು 5:48

Treasury of Scripture Knowledge references in ಕನ್ನಡ IRV.

Back to passage

ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.

ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.

ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.

‹ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.›

‹ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.›

ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.

¶ ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.

¶ ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.

ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.

ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.