TSK

TSK · ಮತ್ತಾಯನು 6:20

Treasury of Scripture Knowledge references in ಕನ್ನಡ IRV.

Back to passage

ಯೇಸು ಅವನಿಗೆ, ‹“ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

¶ ಯೇಸು ಅದನ್ನು ಕೇಳಿ ಅವನಿಗೆ, ‹“ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.

ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.

‹ನಾನು ನಿನ್ನ ಸಂಕಟವನ್ನೂ›‹ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ›‹ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ›‹ಸಭಾಮಂದಿರದವರಾಗಿದ್ದಾರೆ.›