ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು.
TSK
TSK · ಮತ್ತಾಯನು 7:21
Treasury of Scripture Knowledge references in ಕನ್ನಡ IRV.
‹ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ”› ಅಂದನು.
ಅವರಿಗೆ, ‹“ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
‹ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.›
‹“ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ”› ಅಂದನು.
‹ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.›
ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, ‹“ನನ್ನ ತಂದೆಯೇ, ಸಾಧ್ಯವಾದರೆ ಈ›‹ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ”› ಎಂದು ದೇವರನ್ನು ಪ್ರಾರ್ಥಿಸಿದನು.
‹ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ”› ಅಂದನು.
ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, ‹“ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ”› ಎಂದು ಹೇಳಿದನು.
ಅದಕ್ಕೆ ಯೇಸು, ‹“ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು”› ಅಂದನು.
‹ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ”› ಅಂದನು.
ಅದಕ್ಕೆ ಯೇಸು ಅವರಿಗೆ, ‹“ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ”› ಎಂದು ಹೇಳಿದನು.
‹ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.›
‹ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ”› ಎಂದು ಹೇಳಿದನು.
ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.
ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.
ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?
ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.
¶ ‹“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ›‹ಜೀವವೃಕ್ಷದ ಹಕ್ಕು ಇರುವುದು.›‹ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.›