TSK

TSK · ಮತ್ತಾಯನು 9:23

Treasury of Scripture Knowledge references in ಕನ್ನಡ IRV.

Back to passage

ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.

‹‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.›

‹ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.›

ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.