TSK

TSK · ಮಿಕ 4:9

Treasury of Scripture Knowledge references in ಕನ್ನಡ IRV.

Back to passage

ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.

ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.

ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ!

ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.

ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?

ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”

ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.

“ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.