TSK

TSK · ಮಿಕ 6:13

Treasury of Scripture Knowledge references in ಕನ್ನಡ IRV.

Back to passage

ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.

¶ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.

ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.

ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!

ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.