TSK

TSK · ನಹೂಮ 2:13

Treasury of Scripture Knowledge references in ಕನ್ನಡ IRV.

Back to passage

ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.

ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, “ನಿನ್ನ ಭರವಸಕ್ಕೆ ಯಾವ ಆಧಾರವುಂಟು?

ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,

¶ ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,

ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.

ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.

ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ?

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.

ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.

‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ.

¶ ಅಯ್ಯೋ, ರಕ್ತಮಯ ಪಟ್ಟಣವೆ ನಿನ್ನ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ, ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವುದನ್ನು ಬಿಡುವುದೇ ಇಲ್ಲ.

¶ ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು.