TSK

TSK · ನಹೂಮ 2:5

Treasury of Scripture Knowledge references in ಕನ್ನಡ IRV.

Back to passage

¶ ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!

ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.

ರಾಹುತರ ರಭಸ, ಥಳಥಳಿಸುವ ಕತ್ತಿ, ಮಿಂಚುವ ಈಟಿ, ಅಸಂಖ್ಯಾತವಾಗಿ ಹತರಾದ ಸೈನಿಕರ ಶವಗಳ ಮಹಾರಾಶಿ, ಸತ್ತವರು ಲೆಕ್ಕವೇ ಇಲ್ಲ, ನುಗ್ಗುವವರು ಅವರ ಹೆಣಗಳನ್ನು ಎಡವುತ್ತಾರೆ.

ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.