TSK

TSK · ನೆಹೆಮಿಯ 13:31

Treasury of Scripture Knowledge references in ಕನ್ನಡ IRV.

Back to passage

ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.

ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.

ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.

ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.

ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,