TSK

TSK · ಅರಣ್ಯಕಾಂಡ 14:12

Treasury of Scripture Knowledge references in ಕನ್ನಡ IRV.

Back to passage

ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.

ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.

¶ ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.

¶ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.