TSK

TSK · ಅರಣ್ಯಕಾಂಡ 14:40

Treasury of Scripture Knowledge references in ಕನ್ನಡ IRV.

Back to passage

¶ ಅದಕ್ಕೆ ನೀವು, “ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು” ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.

¶ ‹“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.›

‹ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು›