TSK

TSK · ಅರಣ್ಯಕಾಂಡ 16:19

Treasury of Scripture Knowledge references in ಕನ್ನಡ IRV.

Back to passage

ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.

ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.

ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.

¶ ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ಮಗನೂ ಆದ ಕೋರಹನು ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು.

¶ ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.