TSK

TSK · ಅರಣ್ಯಕಾಂಡ 16:38

Treasury of Scripture Knowledge references in ಕನ್ನಡ IRV.

Back to passage

ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.

¶ ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.

ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.

ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.

ನೀನು ಬಹು ಜನರನ್ನು ನಿರ್ಮೂಲ ಮಾಡಿದ್ದು ನಿನ್ನ ಕುಂಟುಂಬಕ್ಕೆ ಅವಮಾನವನ್ನೇ ತಂದಂತಾಯಿತು, ನಿನಗೇ ನೀನೇ ಕೆಡುಕು ಮಾಡಿಕೊಂಡಿದ್ದೀ.

ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.