TSK

TSK · ಅರಣ್ಯಕಾಂಡ 16:41

Treasury of Scripture Knowledge references in ಕನ್ನಡ IRV.

Back to passage

ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು

ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು,

ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,

ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.

ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.

ಕಸ್ದೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬಿಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ” ಎಂದು ಹೇಳಿದರು.

¶ ‹“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.›

“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.