TSK

TSK · ಅರಣ್ಯಕಾಂಡ 21:1

Treasury of Scripture Knowledge references in ಕನ್ನಡ IRV.

Back to passage

ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.

ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.

ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.

¶ ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.