TSK

TSK · ಅರಣ್ಯಕಾಂಡ 21:4

Treasury of Scripture Knowledge references in ಕನ್ನಡ IRV.

Back to passage

ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.

¶ ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.

¶ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು.

ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.

ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ” ಎಂದು ಆಜ್ಞಾಪಿಸಿದನು.

ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್‍ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.

ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.