TSK

TSK · ಅರಣ್ಯಕಾಂಡ 22:31

Treasury of Scripture Knowledge references in ಕನ್ನಡ IRV.

Back to passage

¶ ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.

ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.

¶ ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು

¶ “ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.

ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.

ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ.

ಆತನು ಅವರಿಗೆ ‹“ನಾನೇ ಆತನು”› ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.