TSK

TSK · ಅರಣ್ಯಕಾಂಡ 26:59

Treasury of Scripture Knowledge references in ಕನ್ನಡ IRV.

Back to passage

ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.

ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು.

ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.

¶ ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.