TSK

TSK · ಅರಣ್ಯಕಾಂಡ 27:1

Treasury of Scripture Knowledge references in ಕನ್ನಡ IRV.

Back to passage

¶ ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.

ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.

ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.