TSK

TSK · ಅರಣ್ಯಕಾಂಡ 27:13

Treasury of Scripture Knowledge references in ಕನ್ನಡ IRV.

Back to passage

ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.

“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.

ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.

¶ ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.

ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.