TSK

TSK · ಅರಣ್ಯಕಾಂಡ 32:8

Treasury of Scripture Knowledge references in ಕನ್ನಡ IRV.

Back to passage

“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು.

ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು

¶ ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸುವೆವು. ಅವರು ನಮಗೋಸ್ಕರ ಆ ದೇಶವನ್ನು ಪರೀಕ್ಷಿಸಿ ನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ವಿಷಯದಲ್ಲೂ ಮತ್ತು ಸೇರಬೇಕಾದ ಊರುಗಳ ವಿಷಯದಲ್ಲೂ ನಮಗೆ ವರ್ತಮಾನ ತಿಳಿಸಲಿ” ಎಂದು ಹೇಳಿದಿರಿ.

¶ ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.