TSK

TSK · ಅರಣ್ಯಕಾಂಡ 34:3

Treasury of Scripture Knowledge references in ಕನ್ನಡ IRV.

Back to passage

ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.

ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.

ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.

¶ “ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.