TSK

TSK · ಅರಣ್ಯಕಾಂಡ 35:1

Treasury of Scripture Knowledge references in ಕನ್ನಡ IRV.

Back to passage

¶ ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.

ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು.

ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.

¶ ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,