TSK

TSK · ಅರಣ್ಯಕಾಂಡ 4:24

Treasury of Scripture Knowledge references in ಕನ್ನಡ IRV.

Back to passage

ಗುಡಾರದ ಮತ್ತು ಯಜ್ಞವೇದಿಯ ಸುತ್ತಲಿರುವ ಅಂಗಳದ ತೆರೆಗಳೂ, ಅಂಗಳದ ಬಾಗಿಲಿನ ಪರದೆಗಳು, ಇವುಗಳ ಹಗ್ಗಗಳೂ ಇವೇ. ಇಂತಹ ಸಕಲವಿಧವಾದ ಸೇವಕಾರ್ಯವನ್ನು ಗೇರ್ಷೋನ್ಯರು ಮಾಡಬೇಕು.

ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.

ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,

ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.

¶ ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.