TSK

TSK · ಅರಣ್ಯಕಾಂಡ 5:23

Treasury of Scripture Knowledge references in ಕನ್ನಡ IRV.

Back to passage

¶ ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.

ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;

¶ ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.

¶ ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.