TSK

TSK · ಅರಣ್ಯಕಾಂಡ 6:18

Treasury of Scripture Knowledge references in ಕನ್ನಡ IRV.

Back to passage

¶ “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.

‹ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ”› ಎಂದು ಹೇಳಿದನು.

ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.

ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.