TSK

TSK · ಫಿಲೆಮೋನನಿಗೆ 1:21

Treasury of Scripture Knowledge references in ಕನ್ನಡ IRV.

Back to passage

ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.

ಇವರಿಬ್ಬರ ಸಂಗಡ ನಮ್ಮ ಸಹೋದರರಲ್ಲಿ ಮತ್ತೊಬ್ಬನನ್ನು ಕಳುಹಿಸಿದ್ದೇವೆ; ನಾವು ಅನೇಕ ಸಮಯದಲ್ಲಿಯೂ, ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತನೆಂದು ತಿಳಿದುಕೊಂಡಿದ್ದೇವೆ; ಈಗ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.

ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.