TSK

TSK · ಫಿಲಿಪ್ಪಿಯವರಿಗೆ 2:28

Treasury of Scripture Knowledge references in ಕನ್ನಡ IRV.

Back to passage

ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.

¶ ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು.

ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು.

ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.