TSK

TSK · ಫಿಲಿಪ್ಪಿಯವರಿಗೆ 4:5

Treasury of Scripture Knowledge references in ಕನ್ನಡ IRV.

Back to passage

¶ ‹“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.›

‹ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು›

¶ ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, ‹“ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.›

ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು?

ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.

ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.

ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.

“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.

ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.

¶ ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.

¶ ‹“ಇಗೋ ನೋಡು! ನಾನು›‹ಅತಿಬೇಗನೆ ಬರುತ್ತೇನೆ!›‹ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು”› ಎಂದು ಹೇಳಿದನು.