TSK

TSK · ಙ್ಞಾನೋಕ್ತಿಗಳು 1:27

Treasury of Scripture Knowledge references in ಕನ್ನಡ IRV.

Back to passage

ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.

ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.

ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.

‹ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.›

ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.

ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.